Homeಜನಮನಪ್ರಮುಖ ಸುದ್ದಿ
ಉಚಿತ ಗ್ಯಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ..!

(PM Ujjwala Yojana) ಕೇಂದ್ರ ಸರ್ಕಾರ ಜನರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಉಜ್ವಲ ಯೋಜನೆಯೂ ಒಂದು. ಇದರ ಅಡಿಯಲ್ಲಿ ಮೋದಿ ಸರ್ಕಾರವು ದೇಶದ ಮಹಿಳೆಯರಿಗೆ ಉಚಿತ ಅನಿಲ ಮತ್ತು ಸಿಲಿಂಡರ್ ಗಳನ್ನು ಒದಗಿಸುತ್ತಿದ್ದು, ಇದರ ಪ್ರಯೋಜನ ಪಡೆಯುವುದು ಹೇಗೆ?, ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
- ಮಹಿಳೆ ಮತ್ತು ಮನೆಯ ಮುಖ್ಯಸ್ಥರಾಗಿರಬೇಕು
- 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು
- ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದು?;
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರಗಳು
- ಮೊಬೈಲ್ ಸಂಖ್ಯೆ
- ಪಾಸ್ ಪೋರ್ಟ್ ಗಾತ್ರದ ಛಾಯಾಚಿತ್ರ
- ಪಡಿತರ ಚೀಟಿ
- ಅರ್ಜಿ ಸಲ್ಲಿಸುವುದು ಹೇಗೆ?;
ನಿಮ್ಮ ಹತ್ತಿರದ ಜನ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಉಜ್ವಲ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ (pmuy.gov.in) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.