Homeಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ
ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಕುರಿತು ಮಹತ್ವದ ಕ್ರಮ

ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸಚಿವ ಕೃಷ್ಣಬೈರೇಗೌಡ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಳ ಮಾಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಭಾರತ ಸರ್ಕಾರದ ಪಾಲನ್ನು ನಗರ ಪ್ರದೇಶದಲ್ಲಿ 1.5 ರಿಂದ 5 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 1.2 ರಿಂದ 3 ಲಕ್ಷಕ್ಕೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಎಸ್ಪಿ ಪ್ಯಾಕೇಜ್ ಅನ್ನು ಘೋಷಿಸಿ. ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದು, ರಾಜ್ಯಗಳ ಹಣಕಾಸು ಸಚಿವರನ್ನು ಒಳಗೊಂಡ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬೇಡಿಕೆ ಮಂಡಿಸಿದ್ದಾರೆ.