ಪ್ರಮುಖ ಸುದ್ದಿ
ವಿಪಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ-ಎಚ್.ಕೆ.ಪಾಟೀಲ್
ಬೆಂಗಳೂರಃ ವಿರೋಧ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಲ್ಲಿ ಚುನಾವಣೆ ನಡೆಸುತ್ತಾರೋ ಇಲ್ಲವೋ ನನಗೆ ಗೊತ್ತಿಲ್ಲ. ಹೈಕಮಾಂಡ್ಗೆ ಬಿಟ್ಟ ವಿಚಾರ.ಆದರೆ ನಾನು ವಿಪಕ್ಷದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ವಿಪಕ್ಷ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಏನು ಹೇಳುತ್ತದೆ ಗೊತ್ತಿಲ್ಲ. ಹೈಕಮಾಂಡ್ ನಿರ್ದೇಶನದಂತೆ ನಾವೆಲ್ಲ ನಡೆದುಕೊಳ್ಳುತ್ತೇವೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.