ಪ್ರಮುಖ ಸುದ್ದಿ
ನಾಳೆಗೆ ದೋಸ್ತಿ ಸರ್ಕಾರದ ಆಡಳಿತ ಖತಂ!
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ರಾಜ್ಯ ಮೈತ್ರಿ ಸರ್ಕಾರದ ಆಡಳಿತ ನಾಳೆಗೆ ಕೊನೆ ಆಗುವುದು ಬಹುತೇಕ ಖಚಿತ ಎಂಬ ಅಭಿಪ್ರಾಯ ರಾಜಕೀಯ ವಿಶ್ಲೇಷಕರಿಂದ ವ್ಯಕ್ತವಾಗುತ್ತಿದೆ.
ರಾಜೀನಾಮೆ ನೀಡಿರುವ ಶಾಸಕರು ಅಧಿವೇಶನಕ್ಕೆ ಹಾಜರಾಗುವಂತೆ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ತೀರ್ಪು ನೀಡಿದ್ದು, ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳುವುದು ಖಚಿತ ಎನ್ನಲಾಗುತ್ತಿದೆ.
ಗುರುವಾರ ವಿಶ್ವಾಸಮತ ಯಾಚನೆ ವೇಳೆ 223 ವಿಧಾನಸಭೆ ಸದಸ್ಯರಲ್ಲಿ ರಾಜೀನಾಮೆ ನೀಡಿರುವ 15 ಶಾಸಕರು ಗೈರಾದಲ್ಲಿ ಸಂಖ್ಯಾಬಲ 208ಕ್ಕೆ ಕುಸಿಯಲಿದೆ. ಪರಿಣಾಮ ಮ್ಯಾಜಿಕ್ ನಂಬರ್ 105ಕ್ಕೆ ಇಳಿಯಲಿದ್ದು ಈಗಾಗಲೇ ಬಿಜೆಪಿ 105 ಸಂಖ್ಯಾಬಲ ಹೊಂದಿದೆ.