ಬಿಜೆಪಿಯದ್ದು ಡೋಂಗಿ ಹಿಂದುತ್ವ ಆಂದೋಲಶ್ರೀ ಕಿಡಿ
ರಾಜ್ಯದ 224 ಕ್ಷೇತ್ರಗಳಲ್ಲಿ ಶಿವಸೇನೆ ಅಭ್ಯರ್ಥಿಗಳು ಸ್ಪರ್ಧೆ
ರಾಯಚೂರಃ ಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆಯಿಂದ ರಾಜ್ದದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಲಾಗುತ್ತಿದೆ ಎಂದು ಶ್ರೀರಾಮಸೇನೆ ಗೌರವಾಧ್ಯಕ್ಷ ಆಂದೋಲಾದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಹೆಸರೇಳಿ ಮತ ಪಡೆಯುವ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಯನ್ನು ಯಾರೂ ನಂಬಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಹಿಂದೂ ಕಾರ್ಯಕರ್ತರ ಕೇಸ್ ವಾಪಸ್ ವಿಚಾರದಲ್ಲಿ ಬಿಜೆಪಿ ತನ್ನ ಅಧಿಕಾರ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅತಿ ಹೆಚ್ಚು ಸಮಸ್ಯೆ ಮಾಡಲಾಗಿದೆ.
ಗೂಂಡಾ ಕಾಯ್ದೆ, ರೌಡಿ ಶೀಟ್, ಗಡಿ ಪಾರು ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯ 2008 ರಿಂದ 2013 ರವರೆಗೆ ಸಾಕಷ್ಟು ಹಿಂದು ಕಾರ್ಯಕರ್ತರ ವಿರುದ್ಧ ಕೇಸ್ ಹಾಕಲಾಗಿದೆ.
ಅಧಿಕಾರ ಇದ್ದಾಗ ಬಿಜೆಪಿಯವರು ಹಿಂದುಗಳನ್ನ ನಿರ್ಲಕ್ಷ್ಯ ಮಾಡಿದರು. ಅಧಿಕಾರ ಕಳೆದುಕೊಂಡ ಮೇಲೆ ಹಿಂದುತ್ವದ ಬಗ್ಗೆ ಮಾತಾಡುತ್ತಾರೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರದವರು ಡೋಂಗಿ ಹಿಂದುತ್ವವಾದಿಗಳು
ಯೋಗಿ ಬರಲಿ, ಮೋದಿ ಬರಲಿ ರಾಜ್ಯದಲ್ಲಿ ಶಿವಸೇನೆಯನ್ನು ಬೆಂಬಲಿಸುತ್ತಾರೆ.
ಹಿಂದುತ್ವಕ್ಕಾಗಿ ದುಡಿದವರನ್ನು ಬಿಜೆಪಿ ಮೂಲೆಗುಂಪು ಮಾಡಿದೆ. ಕೇಂದ್ರ ಸರ್ಕಾರಕ್ಕೆ ಹಿಂದುಗಳ ಬಗ್ಗೆ ಗೌರವ ಇದ್ದಿದ್ರೆ ರಾಮ ಮಂದಿರ ನಿರ್ಮಿಸುತ್ತಿದ್ದರು ಅವರಿಗೆ ರಾಮ ಮಂದಿರ ನಿರ್ಮಾಣ ಮಾಡೋದು ಬೇಕಿಲ್ಲ ಅದರಿಂದ ಮತಗಳು, ಅಧಿಕಾರ ಬೇಕು ಅಷ್ಟೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿ ಡೋಂಗಿ ಎನ್ನಲು ಇದೇ ಸಾಕ್ಷಿ.
ಭ್ರಷ್ಟಾಚಾರದ ಕರಾಳ ಮುಖಕ್ಕೆ ಕೇಸರಿ ಬಣ್ಣ ಹಚ್ಚಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.