Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

ರಾಜ್ಯದ 17,800 ಅಂಗನವಾಡಿಗಳು ಶೀಘ್ರವೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದ 17,800 ಅಂಗನವಾಡಿಗಳನ್ನು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದರು.

ಲಕ್ಕವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ, ಅಂಗನವಾಡಿಗಳನ್ನು ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಮೇಲ್ದರ್ಜೆಗೇರಿಸುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಇದಲ್ಲದೆ, ಕೇಂದ್ರ ಸರ್ಕಾರವು ಈ ಉಪಕ್ರಮವನ್ನು ಶ್ಲಾಘಿಸಿದೆ ಮತ್ತು ಆರ್ಥಿಕ ಬೆಂಬಲವನ್ನು ನೀಡಿದೆ ಎಂದು ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂತಹ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ. ಈ ಅಂಗನವಾಡಿಗಳಲ್ಲಿನ ಶಿಕ್ಷಕರು ತಮ್ಮ ಶೈಕ್ಷಣಿಕ ಅರ್ಹತೆಯಾಗಿ ಕನಿಷ್ಠ ಪಿಯುಸಿ-II ಅಥವಾ ಪದವಿಯನ್ನು ಪಡೆದಿರಬೇಕು. ಪ್ರಾಯೋಗಿಕ ಯೋಜನೆಯಾಗಿ ಈಗಾಗಲೇ ಬೆಂಗಳೂರಿನಲ್ಲಿ 250 ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿದ್ದೇವೆ. ಉಳಿದ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಈ ಉಪಕ್ರಮಕ್ಕೆ ಹಣವನ್ನು ಸಕ್ಷಮ್ ಅಂಗನವಾಡಿ ಯೋಜನೆಯಡಿ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರ ಈ ಉದ್ದೇಶಕ್ಕಾಗಿ ಒಂದು ವಾರದಲ್ಲಿ 170 ಕೋಟಿ ರೂ. ನೀಡಲಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button