ಪ್ರಮುಖ ಸುದ್ದಿ
ಸಿದ್ಧರಾಮಯ್ಯ ಸರ್ಕಾರದಿಂದ ಹಗಲು ದರೋಡೆ – ಬಿಎಸ್ ವೈ
ಯಾದಗಿರಿ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಗುರುಮಿಠಕಲ್ ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಟ್ಟಣದಲ್ಲಿ ನಡೆದ ಬಿಜೆಪಿ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡುತ್ತ ತಲೆ ತಿರುಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ರಾಜ್ಯದಲ್ಲಿ ಹಗಲು ದರೋಡೆಗೆ ನಿಂತಿದೆ. ಮಲೇಷಿಯಾದಿಂದ ಮರಳು ತರಿಸುತ್ತಿದ್ದು 50ಕೆಜಿ ಮರಳಿಗೆ 250 ರೂಪಾಯಿ ವೆಚ್ಚವಾಗಲಿದ್ದು ಸಿಮೆಂಟಿಗೂ ಅಷ್ಟು ಖರ್ಚಾಗೋದಿಲ್ಲ ಎಂದು ಹೇಳಿದ್ದಾರೆ.