ಪ್ರಮುಖ ಸುದ್ದಿ
ಶ್ರೀನಗರಃ ಅಡಗಿದ್ದ 3 ಉಗ್ರರ ಹತ್ಯೆ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ
ಜಮ್ಮು- ಕಾಶ್ಮೀರ: ಶ್ರೀನಗರದ ಪಂಥಾ ಚೌಕ್‌ನಲ್ಲಿ ನಿನ್ನೆ ರಾತ್ರಿ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆ ಗುಂಡಿಕ್ಕಿ ಕೊಂದಿದೆ.
ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಪಂಥ್ ಚೌಕ್ ನ ಮನೆಯೊಂದರಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಪಡೆದ ಭದ್ರತಾ ಪಡೆಗಳು ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರದಲ್ಲಿ ಇಂಟರನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ವಾಹನ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.




