ಪ್ರಮುಖ ಸುದ್ದಿ

ಯಾದಗಿರಿಃ 14 ಸಾವಿರ ಹೊಸ ಮತದಾರರ ಸೇರ್ಪಡೆ

14 ಸಾವಿರ ಹೊಸ ಮತದಾರರ ಸೇರ್ಪಡೆ

ಯಾದಗಿರಿಃ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಜ. 16 ರಿಂದ ಮಾರ್ಚ್ 21 ರವರೆಗೆ 14,488 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಹಾಗೂ ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ವಿಧಾನಸಭಾ/ಲೋಕಸಭಾ ಚುನಾವಣೆಯ ಮಸ್ಟರ್ ರೋಲ್ ಕುರಿತ ಚರ್ಚಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

2019ರ ಜನವರಿ 16ರಂತೆ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯಲ್ಲಿ 9,77,217 ಮತದಾರರಿದ್ದಾರೆ. ನಿರಂತರವಾಗಿ ಅಪ್‍ಡೇಟ್ ಮಾಡುತ್ತಿರುವುದರಿಂದ 14,488 ಹೊಸ ಮತದಾರರ ಸೇರ್ಪಡೆಯಾಗಿದೆ. 3,815 ಅನರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಧಾನಸಭಾ ಕ್ಷೇತ್ರಗಳ ಮತದಾರರ ಭಾವಚಿತ್ರ ಒಳಗೊಂಡ ಪಟ್ಟಿಯನ್ನು ಯಾವುದೇ ಲೋಪದೋಷ ಇಲ್ಲದಂತೆ ಸಿದ್ಧಪಡಿಸಿದರೆ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆಸಲು ಸಾಧ್ಯವಾಗುತ್ತದೆ.

ಅರ್ಹ ಮತದಾರರು ಅರ್ಜಿ ನಮೂನೆ 6ರಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಲು ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಅಂದರೆ ಏಪ್ರಿಲ್ 4ರವರೆಗೂ ಅವಕಾಶ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿ ಮತದಾರರ ಪಟ್ಟಿ ಸಿದ್ಧಪಡಿಸಬೇಕು. ತದನಂತರ ಅರ್ಹ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ತಲುಪಿಸಲು ಕ್ರಮ ವಹಿಸಬೇಕು ಎಂದು ಅವರು ನಿರ್ದೇಶಿಸಿದರು.

ಮತದಾರರು ಖಚಿತಪಡಿಸಿಕೊಳ್ಳಲು ತಿಳಿಸಿ: ಕೇವಲ ಚುನಾವಣಾ ಗುರುತಿನ ಚೀಟಿ ಹೊಂದಿದ್ದ ಮಾತ್ರಕ್ಕೆ ಮತದಾರರ ಪಟ್ಟಿಯಲ್ಲಿ ಹೆಸರು ಇದೆ ಎಂದು ಭಾವಿಸುವಂತಿಲ್ಲ. ಕಾರಣ, ಪ್ರಸ್ತುತ ಚಾಲ್ತಿಯಲ್ಲಿರುವ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಲು ತಿಳಿಸಬೇಕು.

ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಸಹಾಯವಾಣಿ ಸಂಖ್ಯೆ-1950 ಗೆ ಕರೆ ಮಾಡಿ ಅಥವಾ ವೆಬ್‍ಸೈಟ್ hಣಣಠಿ://ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ಅಥವಾ “ವೋಟರ್ ಹೆಲ್ಪಲೈನ್” ಮೊಬೈಲ್ ಆ್ಯಪ್ ಮೂಲಕ ಖಚಿತಪಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದರು.

Related Articles

Leave a Reply

Your email address will not be published. Required fields are marked *

Back to top button