Homeಜನಮನಪ್ರಮುಖ ಸುದ್ದಿ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ FIR

ಬೆಂಗಳೂರು: ಚುನಾವಣಾ ಬಾಂಡ್ (Electoral Bonds) ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಇವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.
ನಿರ್ಮಲಾ ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (JSP) ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.
ಎ1 ಆರೋಪಿ: ನಿರ್ಮಲಾ ಸೀತಾರಾಮನ್ ಎ1 ಆರೋಪಿಯಾಗಿದ್ದಾರೆ.