ಪ್ರಮುಖ ಸುದ್ದಿ
ಪಿಡಬ್ಲೂಡಿ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ
ಯಾದಗಿರಿಃ ಪಿಡಬ್ಲೂಡಿ ಕಚೇರಿಯಲ್ಲಿ ಬೆಂಕಿ
ಯಾದಗಿರಿಃ ನಗರದ ಪಿಡಬ್ಲೂಡಿ ಕಚೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಚೇರಿಯ ಗಣಕ ಯಂತ್ರದ ಕೊಠಡಿಯಲ್ಲಿ ಬೆಂಕಿ ಕೆನ್ನಾಲಿಗೆ ಬೀರಿದ್ದು, ಕಂಪ್ಯೂಟರ್ ಸೇರಿದಂತೆ ಮಹತ್ವದ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ.
ಶಾರ್ಟ್ ಸಕ್ರ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ ಸುಭಾಷ್ ವೃತ್ತದ ಹತ್ತಿರದದಲ್ಲಿರುವ ಪಿಡಿಡಬ್ಲೂ ಕಚೇರಿಯ ಗಣಕ ಯಂತ್ರದ ಕೊಠಡಿಯಲ್ಲಿ ಬೆಂಕು ಕಾಣಿಕೊಂಡಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.