ಪ್ರಮುಖ ಸುದ್ದಿ
ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಗೆ ಕಮಲ ಪಡೆ ಕಂಗಾಲು!
ಬೆಳಗಾವಿ : ಬಾರತೀಯ ಜನತಾ ಪಕ್ಷದ ಕೆಲ ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ. ಆ ಮೂಲಕ ಕಮಲ ಪಾಳೇಯಕ್ಕೆ ಚೆಕ್ ನೀಡಿದ್ದಾರೆ. ಹೀಗಾಗಿ, ಜೆಡಿಎಸ್-ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ಒಮ್ಮೆ ಯೋಚಿಸುವಂತೆ ಮಾಡಿದೆ.