ಪ್ರಮುಖ ಸುದ್ದಿ

ಪೊಲೀಸರಿಂದ ಮೂವರು ಭಯೋತ್ಪಾದಕರ ಬಂಧನ

ಜಮ್ಮು, ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡ್ಗಮ್ ಜಿಲ್ಲೆಯಲ್ಲಿ ಮೂವರು ಭಯೋತ್ಪಾದಕರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿದ್ದ ಒಂದು ಎಸ್ಎಲ್ಆರ್, ಒಂದು ಪಿಸ್ತೂಲ್ ಮತ್ತು ಗ್ರೆನೇಡ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಲ್ಲದೆ ಬಂಧಿತ ಭಯೋತ್ಪಾದಕರ ವಿಚಾರಣೆಯನ್ನು ಪೊಲೀಸರು ತೀವ್ರಗತಿಯಲ್ಲಿ ನಡೆಸಿದ್ದಾರೆ.

ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತನಿಖೆಕೈಗೊಂಡಿದ್ದಾರೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಕಟ್ಟೆಚ್ಚರವಹಿಸಲಾಗಿದೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button