ಹೊಡೆದ ಬಲ್ಬ್ , ವಿಜ್ಞಾನಿ ಎಡಿಸನ್ ನೀಡಿದ ಅದ್ಭುತ ಸಂದೇಶ ಇದನ್ನೊಮ್ಮೆ ಓದಿ
ದಿನಕ್ಕೊಂದು ಕಥೆ
ಎಡಿಸನ್ ಎಷ್ಟು ಕರೆಕ್ಟಾಗಿ ಹೇಳಿದ್ದ!
ವರ್ಷಗಟ್ಟಲೆ ಶ್ರಮಿಸಿ ಬಲ್ಬ್ ಕಂಡುಹಿಡಿದಿದ್ದ ಥಾಮಸ್ ಅಲ್ವಾ ಎಡಿಸನ್. ಅದನ್ನು ಹೋಲ್ಡರ್ ಗೆ ಸಿಕ್ಕಿಸಬೇಕಿತ್ತು. ಹೋಲ್ಡರ್ ಇದ್ದುದು ಮಹಡಿಯ ಮೇಲೆ. “ಹೋಗಿ ಅದಕ್ಕೆ ಸಿಕ್ಕಿಸಿ ಬಾ” ಎಂದು ತನ್ನ ಸಹಾಯಕನೊಬ್ಬನಿಗೆ ಹೇಳಿದ ಎಡಿಸನ್. ಹುಡುಗ ಎಷ್ಟು ನರ್ವಸ್ ಆಗಿದ್ದನೆಂದರೆ ಮೆಟ್ಟಿಲು ಹತ್ತುವುದರೊಳಗಾಗಿ ಅವನ ಕೈ ನಡುಗಿ ಆಗಷ್ಟೇ ಕಷ್ಟಪಟ್ಟು ತಯಾರಿಸಿದ ಬಲ್ಬ್ ಬಿದ್ದು ಒಡೆದುಹೋಯಿತು.
ಎಡಿಸನ್ ಸಿಟ್ಟಾಗಲಿಲ್ಲ. ಮತ್ತೊಂದು ಬಲ್ಬ್ ತಯಾರಿಸಿದ. ಅದಕ್ಕೆ ಪೂರ್ತಿ ಇಪ್ಪತ್ನಾಲ್ಕು ತಾಸು ಹಿಡಿದವು. ಅವನ ಟೀಮಿನ ಅಷ್ಟೂ ಸಹಾಯಕರು ಅದಕ್ಕಾಗಿ ದುಡಿದಿದ್ದರು. ಎಲ್ಲಾ ಆದ ಮೇಲೆ ಮತ್ತೆ ಅದೇ ಹುಡುಗನನ್ನು ಕರೆದು “ಈ ಸಲವೂ ನೀನೇ ಸಿಕ್ಕಿಸಿ ಬಾ” ಎಂದ. ಉಳಿದ ಸಹಾಯಕರು ಇರಸು ಮುರಿಸಿಗೆ ಒಳಗಾದರು.
ಈ ಹುಡುಗ ಮತ್ತೆ ಬಲ್ಬ್ ಒಡೆದರೆ, ಅದನ್ನು ತಯಾರಿಸಲು ಮತ್ತೆ ಇಪ್ಪತ್ನಾಲ್ಕು ಗಂಟೆ ಬೇಕು. ಎಡಿಸನ್ ಯಾಕಿಂತ ರಿಸ್ಕು ತೆಗೆದುಕೊಳ್ಳುತ್ತಿದ್ದಾನೆ?
ಅದಕ್ಕೆ ಎಡಿಸನ್ ಹೇಳಿದ : “ನೋಡ್ರೋ, ಅಂಥ ಸಾವಿರ ಬಲ್ಬ್ ಗಳನ್ನು ಸಾವಿರ ದಿನ ಕೆಲಸ ಮಾಡಿ ತಯಾರಿಸಿ ಬಿಡಬಹುದು. ಆದರೆ ಆ ಹುಡುಗನ ಆತ್ಮವಿಶ್ವಾಸ ನಾಶವಾಗಿ ಬಿಟ್ಟರೆ ಅದನ್ನು ಮತ್ತೆ ತುಂಬಿ ಕೊಡುವುದು ಸುಲಭವಲ್ಲ!”
ಎಡಿಸನ್ ಎಷ್ಟು ಕರೆಕ್ಟಾಗಿ ಹೇಳಿದ್ದನಲ್ಲವೇ?
🖊️ಸಂಗ್ರಹ🖋️
ಡಾ.ಈಶ್ವರಾನಂದ ಸ್ವಾಮೀಜಿ.
📞 – 9341137882