ಐಎಲ್‍ಐ, ಸ್ಯಾರಿ ಪ್ರಕರಣ ತ್ವರಿತಗತಿಯಲ್ಲಿ ಪತ್ತೆ ಮಾಡಿ-ಎಂ.ಕೂರ್ಮಾ ರಾವ್
ಜಿಲ್ಲಾ ಮಟ್ಟದ ಕೊರೊನಾ ನಿಗ್ರಹ ತಂಡಗಳಿಗೆ ತರಬೇತಿ ಕಾರ್ಯಾಗಾರ
ಯಾದಗಿರಿ-: ಇತ್ತೀಚೆಗೆ ಕೆಲವೊಂದು ಪ್ರಕರಣಗಳು ಅಂತರರಾಜ್ಯ ಮತ್ತು ಯಾವುದೇ ಪ್ರವಾಸದ ಹಿನ್ನೆಲೆ ಇಲ್ಲದಿದ್ದರೂ ಕೋವಿಡ್-19 ಸಕಾರಾತ್ಮಕ ಪ್ರಕರಣಗಳೆಂದು ಪತ್ತೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಐಎಲ್‍ಐ ಮತ್ತು ಸ್ಯಾರಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಪತ್ತೆ ಹಚ್ಚಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬುಧವಾರ ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆಯನ್ನು ನಿಗ್ರಹಿಸಲು ರಚಿಸಿರುವ ಜಿಲ್ಲಾ ಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಕಾರ್ಯ ತಂಡಗಳ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ಪರಿಣಾಮಕಾರಿ ತಡೆಗಾಗಿ ಜಿಲ್ಲಾ ಮಟ್ಟದಲ್ಲಿ ಒಟ್ಟು 13 ತಂಡಗಳನ್ನು ರಚಿಸಿ, ಆಯಾ ತಂಡಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಅದರಂತೆ ತಂಡಗಳಲ್ಲಿನ ಅಧಿಕಾರಿಗಳು ಕಾರ್ಯನಿರ್ವಹಣೆ ಜೊತೆಗೆ ವರದಿ ಸಲ್ಲಿಸಬೇಕು. ಪರೀಕ್ಷಾ ತಂಡವು ಆರೋಗ್ಯ ಇಲಾಖೆ ಮಾರ್ಗಸೂಚಿಗಳ ಪ್ರಕಾರ ತೀವ್ರವಾದ ಕೋವಿಡ್-19 ಪರೀಕ್ಷೆ ನಡೆಸಬೇಕು.
ಪ್ರಾಥಮಿಕ ಸಂಪರ್ಕಗಳು, ವೈದ್ಯರು ನಿರ್ಧರಿಸಿದ ಶಂಕಿತ ಪ್ರಕರಣಗಳು, ಎಲ್ಲಾ ಎಸ್‍ಎಆರ್‍ಐ ಪ್ರಕರಣಗಳು, ಎಲ್ಲಾ ಐಎಲ್‍ಐ ಪ್ರಕರಣಗಳು, ಹೆಚ್ಚು ಸಾರ್ವಜನಿಕ ಸಂಪರ್ಕ ಹೊಂದಿರುವ ಪೆÇಲೀಸ್, ವಾಚ್‍ಮೆನ್, ತರಕಾರಿ ವ್ಯಾಪಾರಿಗಳು, ಹೋಟಲ್ ಕ್ಯಾಶಿಯರ್ ಇತ್ಯಾದಿ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಬೇಕು. ಶೀಘ್ರ ಫಲಿತಾಂಶ ಬರುವಂತೆಯೂ ನೋಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ಸಂಪರ್ಕ ಪತ್ತೆ ಹಚ್ಚುವಿಕೆ ತಂಡವು ಕೊರೊನಾ ಪಾಸಿಟಿವ್ ವ್ಯಕ್ತಿಯ ಎಲ್ಲಾ ಸಂಪರ್ಕಗಳನ್ನು ತ್ವರಿತಗತಿಯಲ್ಲಿ ಪತ್ತೆ ಹಚ್ಚಬೇಕು. 24 ಗಂಟೆಯೊಳಗಾಗಿ ಅತಿ ಹೆಚ್ಚಿನ ಅಪಾಯದ ಸಂಪರ್ಕಗಳನ್ನು ಗುರುತಿಸಬೇಕು. ಸೋಂಕಿತ ವ್ಯಕ್ತಿಯ ಮೊಬೈಲ್ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಬೇಕು. ಸಂಪರ್ಕ ಪತ್ತೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಪಟ್ಟ ಆ್ಯಪ್ ಅಥವಾ ಪೆÇೀರ್ಟಲ್‍ಗಳಲ್ಲಿ ಸಕಾಲದಲ್ಲಿ ಅಪಡೇಟ್ ಮಾಡಬೆಕು. ಕೋವಿಡ್ ಆರೈಕೆ ಕೇಂದ್ರ (ಸಿಸಿಸಿ) ತಂಡವು ಹಾಸಿಗೆ, ಉಪಕರಣ, ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಪೂರಕ ಸಿಬ್ಬಂದಿ, ವಾಹನ ಸೌಲಭ್ಯ, ಆಹಾರ, ಸ್ಯಾನಿಟೈಸೇಷನ್ ಸೇರಿದಂತೆ ಅತ್ಯಗತ್ಯತೆಯನ್ನು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಇದೇ ರೀತಿ ಕಂಟೇನ್‍ಮೆಂಟ್ ವಲಯಗಳ ತಂಡ, ಕ್ವಾರಂಟೈನ್ ನಿಗಾವಣೆ ತಂಡ, ಜಿಲ್ಲಾ ನಿಯಂತ್ರಣ ಕೊಠಡಿ ತಂಡ, ಮೃತ ದೇಹದ ನಿರ್ವಹಣೆ ತಂಡ, ಅಂತರರಾಜ್ಯ ಪ್ರಯಾಣಿಕರ ವೀಕ್ಷಣೆ ತಂಡ, ಮಾತೃ ಮತ್ತು ಮಗುವಿನ ಆರೋಗ್ಯ ಸೇವಾ ಕಾರ್ಯಕ್ರಮ ತಂಡ ಸೇರಿದಂತೆ ಇನ್ನಿತರ ಎಲ್ಲಾ ತಂಡಗಳು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಒಂದು ವೇಳೆ ಪಾಲಿಸದಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಅನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ನೊಟೀಸ್ ಕೊಡಿ: ಕೊರೊನಾ ನಿಗ್ರಹಿಸುವಿಕೆಯಲ್ಲಿ ಪ್ರತಿಯೊಂದು ಖಾಸಗಿ ಆಸ್ಪತ್ರೆ, ಮೆಡಿಕಲ್ ಹಾಗೂ ಪ್ರಯೋಗಾಲಯಗಳ ಪಾತ್ರ ಕೂಡ ಮುಖ್ಯವಾಗಿದೆ. ಆದ್ದರಿಂದ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳಲ್ಲಿ ಐಎಲ್‍ಐ/ ಸ್ಯಾರಿ ರೋಗ ಲಕ್ಷಣ ಕಂಡುಬರುವ ರೋಗಿಗಳ ದತ್ತಾಂಶವನ್ನು ಕೆಪಿಎಂಇ ವೆಬ್ ಪೆÇೀರ್ಟಲ್‍ನಲ್ಲಿ ನಮೂದಿಸದ ಮತ್ತು ಜ್ವರ, ಕೆಮ್ಮು, ಅಲರ್ಜಿ, ಐಎಲ್‍ಐ/ ಸ್ಯಾರಿ ಪ್ರಕರಣಗಳಿಗೆ ಸಂಬಂಧಿಸಿದ ಔಷಧಗಳನ್ನು ಮಾರಾಟ ಮಾಡಿದ ವಿವರಗಳನ್ನು https://pharma.karnataka.tech ಮೂಲಕ ಪ್ರತಿದಿನ ಎಂಟ್ರಿ ಮಾಡದ ಚಿಲ್ಲೆರೆ ಔಷಧಿ ವರ್ತಕರಿಗೆ ನೊಟೀಸ್ ಕೊಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಡಿವೈಎಸ್‍ಪಿ ಯು.ಶರಣಪ್ಪ, ವಿಶ್ವ ಆರೋಗ್ಯ ಸಂಸ್ಥೆಯ ಕಲಬುರಗಿ ವಿಭಾಗಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ ಡಾ.ಅನಿಲ್‍ಕುಮಾರ್ ಎಸ್.ತಾಳಿಕೋಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್ ಅವರು ಉಪಸ್ಥಿತರಿದ್ದರು.