ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಹೆಗಲಿಗೆ ಕೊರೊನಾ ನಿಯಂತ್ರಣ ಹೊಣೆ –ಜಗನಾಥರಡ್ಡಿ
ತಾಲೂಕು ಕೋವಿಡ್ ಟಾಸ್ಕ್ ಫೋರ್ಸ್ ಕಮಿಟಿ ಸಭೆ
yadgiri, ಶಹಾಪುರಃ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರಾಮ ಮಟ್ಟದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆ ಮತ್ತು ಜಾಗೃತಿ ಕಾರ್ಯಕ್ರಮ ಮತ್ತು ಜವಬ್ದಾರಿವಹಿಸುವ ಕುರಿತು ಶಹಾಪುರ ತಹಸೀಲ್ದಾರ ಜಗನಾಥರಡ್ಡಿಯವರ ನೇತೃತ್ವದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಕಮಿಟಿ ಸಭೆ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ ಜಗನ್ನಾಥರಡ್ಡಿ, ಗ್ರಾಮೀಣ ಮಟ್ಟದಲ್ಲಿ ಬಂದ ಒಲಸೆ ಕಾರ್ಮಿಕರಿಗೆ ಊಟದ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್ ನೀಡುವದು. ಮತ್ತು ಲಸಿಕೆ ಹಾಕಿಸಲು ಸ್ವಯಂ ಸೇವಕರನ್ನು ಗುರುತಿಸಿ ಅವರ ದೂರವಾಣಿಗಳನ್ನು ಬಳಕೆ ಮಾಡಿಕೊಂಡು ಅವರ ಸಹಕಾರದಿಂದ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಬೇಕಿದೆ. ಆ ನಿಟ್ಟಿನಲ್ಲಿ ಪಂಚಾಯತ ಮಟ್ಟದಲ್ಲಿ ಸಹಾಯವಾಣಿ ತೆರೆಯುವದು. ಹೀಗೆ ಹತ್ತು ಹಲವಾರು ವಿಷಯಗಳ ಬಗೆಯಲ್ಲಿ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಸೇರಿದಂತೆ ಈ ಎಲ್ಲಾ ಜವಬ್ದಾರಿಯನ್ನು ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಹೆಗಲಿಗೆ ಹೊಣೆ ಹೊರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಗ್ರಾಮೀಣ ಮತ್ತು ಪಂಚಾಯತ ರಾಜ್ ಇಲಾಖೆ ಬೆಂಗಳೂರವರ ಆದೇಶ 28-4-2021 ರನ್ವಯದಂತೆ ತಿವ್ರ ಕ್ರಮಕ್ಕೆ ಮುಂದಾಗಿದೆ ಎಂದ ಅವರು, ಗ್ರಾಪಂ ಮಟ್ಟದಲ್ಲಿ ಈ ಕೋವಿಡ್ ಅಲೆ ತಡೆಗಾಗಿ ಹಗಲಿರಳು ಪ್ರಯತ್ನ ಮಾಡುವದು ಅವಶ್ಯಕವಾಗಿದೆ ಎಂದರು.
ಸಭೆಯಲ್ಲಿ ತಾಪಂ ಕಾರ್ಯನಿರ್ವಹಣ ಅಧಿಕಾರಿ ಜಗನಾಥಮೂರ್ತಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ರಮೇಶ ಗುತ್ತೇದಾರ, ಗ್ರಾಮೀಣ ಸಿಪಿಐ ಶ್ರೀನಿವಾಸ ಅಲ್ಲಾಪುರೆ ಸೇರಿದಂತೆ ಕಮಿಟಿ ಸದಸ್ಯರು ಹಾಜರಿದ್ದರು.