ನಕಲಿ ಛಾಪಾ ಕಾಗದ ಹಗರಣದ ಅಪರಾಧಿ ಅಬ್ದುಲ್ ಕರೀಂಲಾಲ್ ತೆಲಗಿ ಸಾವು
ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಅಪರಾಧಿ ಅಬ್ದುಲ್ ಕರೀಂಲಾಲ್ ತೆಲಗಿ (56) ಸಾವನ್ನಪ್ಪಿದ್ದಾನೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಪರಾಧಿ ತೆಲಗಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ. ಕಳೆದ ಒಂದು ವಾರದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೆಲಗಿ ಇಂದು ಮದ್ಯಾನ 4ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾನೆ.
ದೇಶದ ಬಹುದೊಡ್ಡ ಹಗರಣದ ರೂವಾರಿ ಆಗಿದ್ದ ಅಪರಾಧಿ ತೆಲಗಿ ಸುಮಾರು 1ದಶಕಕ್ಕೂ ಹೆಚ್ಚು ಕಾಲದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಛಾಪಾ ಕಾಗದ ಹಗರಣದ ಕಿಂಗ್ ಪಿನ್ ಆಗಿದ್ದ ತೆಲಗಿಗೆ ಅನೇಕ ವರ್ಷಗಳಿಂದಲೂ ಅನಾರೋಗ್ಯ ಕಾಡುತ್ತಿತ್ತು. ತೆಲಗಿ ಅನಾರೋಗ್ಯದ ಬಗ್ಗೆ ಅನೇಕ ಕಟ್ಟು ಕಥೆಗಳು ಹುಟ್ಟಿಕೊಂಡಿದ್ದವು. ಆದರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತೆಲಗಿ ಕಳೆದ 1ವಾರದಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಿದೆ ಇಂದು ಮದ್ಯಾನ ಅಸುನೀಗಿದ್ದಾನೆ.