ಪ್ರಮುಖ ಸುದ್ದಿ
ಮೇಲ್ಛಾವಣಿ ಕುಸಿದು ಬಿದ್ದು ಮೂವರು ಸಾವು!
ಬಳ್ಳಾರಿ : ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದು ಮೂವರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಇಮಾಮ್(40), ಹಸೀನಾ(28) ಮತ್ತು ಇಮ್ರಾನ್(03) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿರಗುಪ್ಪಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.