ಪ್ರಮುಖ ಸುದ್ದಿ
ಬಂಡೀಪುರ ಅರಣ್ಯದಲ್ಲಿ ಮತ್ತೊಂದು ಹುಲಿ ಬಲಿ!
ಮೈಸೂರು: ಬಂಡೀಪುರ ಹುಲಿ ರಕ್ಷಿತಾರಣ್ಯದ ಜಂಗಲ್ ರೆಸಾರ್ಟ್ ಸಮೀಪ ಆರು ವರ್ಷದ ಹೆಣ್ಣು ಹುಲಿಯ ಶವ ಪತ್ತೆ ಆಗಿದೆ. ಕಳೆದ ಆರು ತಿಂಗಳಲ್ಲಿ ಹುಲಿಗಳು ಶವವಾಗಿ ಪತ್ತೆಯಾದ ನಾಲ್ಕನೇ ಪ್ರಕರಣ ಇದಾಗಿದೆ. ವಾಹನಗಳ ಡಿಕ್ಕಿಯಿಂದಾಗಿ ಹುಲಿ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ಶವಪರೀಕ್ಷೆ ಬಳಿಕ ಖಚಿತ ಮಾಹಿತಿ ಹೊರ ಬರಲಿದೆ. ಅಪಘಾತಗಳಿಗೆ ಬಲಿಯಾಗುತ್ತಿರುವ ಕಾಡು ಪ್ರಾಣಿಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಪ್ರಾಣಿ ಪ್ರಿಯರ ಆಗ್ರಹವಾಗಿದೆ.