ಪ್ರಮುಖ ಸುದ್ದಿ
ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ, ಇಬ್ಬರು ವಕೀಲರು ಸಾವು!
ಕಲಬುರಗಿ: ಅಫಜಲಪುರ ತಾಲೂಕಿನ ಮಲ್ಲಾಬಾದ ಗ್ರಾಮದ ಸಮೀಪ ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ವಕೀಲರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮಲ್ಲಾಬಾದ ಗ್ರಾಮದ ವಕೀಲ ರಮೇಶ ದೊಡ್ಡಮನಿ (38), ಕಲಬುರಗಿ ನಗರದ ನಿವಾಸಿಯಾದ ವಕೀಲ ಶ್ರೀರಂಗ ಸೇಡಕರ್ (40) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಟ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದಿದ್ದೇ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಅಫಜಲಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ