ಪ್ರಮುಖ ಸುದ್ದಿ
ಯಾದಗಿರಿಃ ಇಬ್ಬರು ಬಾಲ ಕಾರ್ಮಿಕರ ವಶಕ್ಕೆ
ಯಾದಗಿರಿಃ ಇಬ್ಬರು ಬಾಲ ಕಾರ್ಮಿಕರ ವಶಕ್ಕೆ
ಯಾದಗಿರಿ: ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಬಾಲ ಕಾರ್ಮಿಕ ಇಲಾಖೆಯ ತಂಡವು ಶುಕ್ರವಾರ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕರನ್ನು ವಶಕ್ಕೆ ತೆಗೆದುಕೊಂಡು, ಅಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾಖಲಿಸಲಾಗಿದೆ ಎಂದು ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ ಅವರು ತಿಳಿಸಿದರು.
ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ ಮಾಲೀಕರಿಗೆ ದಾಳಿ ಸಂದರ್ಭದಲ್ಲಿ ನೋಟಿಸ್ ಜಾರಿ ಮಾಡಿದ್ದು, ಜಿಲ್ಲಾಧಿಕಾರಿಗಳ ಆದೇಶ ಪಡೆದು ಮುಂದಿನ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರಿದ್ದರು.