Homeಪ್ರಮುಖ ಸುದ್ದಿ
`UAPA’ ಪ್ರಕರಣ: ನ್ಯೂಸ್ ಕ್ಲಿಕ್ ಸಂಪಾದಕರ ಬಿಡುಗಡೆಗೆ ಸುಪ್ರೀಂ ಆದೇಶ
ನವದೆಹಲಿ: ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ.
ನ್ಯಾ.ಬಿಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ.
ಪ್ರಭಿರ್ ಪುರ್ಕಾಯಸ್ಥ ವಿರುದ್ಧ ಸಲ್ಲಿಸಿದ್ದ ಎಫ್ಐಆರ್ ನಲ್ಲಿ ನ್ಯೂಸ್ ಕ್ಲಿಕ್ ನ್ಯೂಸ್ ಪೋರ್ಟಲ್ ಸಂಸ್ಥೆ ಭಾರತದ ಸಾರ್ವಭೌಮತೆಗೆ ಧಕ್ಕೆ ಉಂಟುಮಾಡುವುದಕ್ಕಾಗಿ ಮತ್ತು ದೇಶದ ವಿರುದ್ಧ ಅಸಮಾಧಾನವನ್ನು ಉಂಟುಮಾಡುವುದಕ್ಕಾಗಿ ಚೀನಾದಿಂದ ಹಣಕಾಸು ನೆರವು ಪಡೆಯುತ್ತಿತ್ತು ಎಂದು ಆರೋಪಿಸಲಾಗಿತ್ತು.
2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು FIR ನಲ್ಲಿ ಆರೋಪಿಸಲಾಗಿತ್ತು.