ಪ್ರಮುಖ ಸುದ್ದಿ
ಯಾದಗಿರಿ-ಅಕ್ಟೋಬರ್ 8ರಂದು ಉದ್ಯೋಗ ಮೇಳ
ಅಕ್ಟೋಬರ್ 8ರಂದು ಉದ್ಯೋಗ ಮೇಳ
ಯಾದಗಿರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 8 ರಂದು ಬೆಳಿಗ್ಗೆ 10.30 ರಿಂದ ಸಾಯಂಕಾಲ 4 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಒಂದು ದಿನದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ, ಐ.ಟಿ.ಐ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪಾಸಾದ ಅಭ್ಯರ್ಥಿಗಳು, 18 ರಿಂದ 35 ವಯಸ್ಸಿನೊಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಈ ಸಂದರ್ಶನಕ್ಕೆ (ಉದ್ಯೋಗ ಮೇಳ) ಹಾಜರಾಗುವವರಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.