Homeಜನಮನಪ್ರಮುಖ ಸುದ್ದಿ

UPI ಟ್ಯಾಕ್ಸ್ ಪೇಮೆಂಟ್ ಮಿತಿ 5 ಲಕ್ಷ ರೂ.ಗೆ ಏರಿಕೆ..!

ನವದೆಹಲಿ: ತೆರಿಗೆ ಪಾವತಿಯನ್ನು ಸುಲಭಗೊಳಿಸಲು ಆರ್‌ಬಿಐ ಕ್ರಮ ಕೈಗೊಂಡಿದ್ದು, ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿಯನ್ನು 1 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿದೆ.

ಆರ್‌ಬಿಐನ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗವರ್ನರ್ ಶಕ್ತಿಕಾಂತ ದಾಸ್ ಈ ಮಾಹಿತಿ ನೀಡಿದರು. ಸದ್ಯಕ್ಕೆ ಯುಪಿಐ ಮೂಲಕ 1 ಲಕ್ಷ ರೂ.ವರೆಗೆ ಹಣ ಕಳುಹಿಸಬಹುದು. ಈಗ ತೆರಿಗೆ ಪಾವತಿಗಾಗಿ ಯುಪಿಐ ಮೂಲಕ 5 ಲಕ್ಷ ರೂ.ವರೆಗೆ ಹಣ ಕಳುಹಿಸಲು ಸಾಧ್ಯ ಎಂದು ಹೇಳಿದರು.

ಒಂದು ವಹಿವಾಟಿನಲ್ಲಿ ಈಗ ನೀವು 5 ಲಕ್ಷ ರೂ.ವರೆಗೆ ತೆರಿಗೆ ಪಾವತಿ ಮಾಡಲು ಸಾಧ್ಯವಾಗುತ್ತದೆ. ಕಳೆದ ಡಿಸೆಂಬರ್‌ನಲ್ಲಿ (2023) ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯುಪಿಐ ಮೂಲಕ ಮಾಡಲಾಗುವ ಹಣ ಪಾವತಿ ಮಿತಿಯನ್ನು 1 ಲಕ್ಷ ರೂನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿತ್ತು. ಈಗ ತೆರಿಗೆ ಪಾವತಿ ಕಾರ್ಯವನ್ನು ಸುಗಮಗೊಳಿಸಲು ಟ್ಯಾಕ್ಸ್ ಪೇಮೆಂಟ್ ಮಿತಿಯನ್ನೂ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button