ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಆನಂದವೆಂಬುದ ಆಲಿಂಗನವ ಮಾಡಿ…
ನಾ ಮಾರಬಂದ ಸುಧೆಯ ಕೊಂಬವರಾರೂ ಇಲ್ಲ.
ಹೊರಗಣ ಭಾಜನಕ್ಕೆ, ಒಳಗಣ ಇಂದ್ರಿಯಕ್ಕೆ
ಉಂಡು ದಣಿದು, ಕಂಡು ದಣಿದು, ಸಂದೇಹವ ಬಿಟ್ಟು ದಣಿದು,
ಕಂಡುದ ಕಾಣದೆ, ಸಂದೇಹದಲ್ಲಿ ಮರೆಯದೆ,
ಆನಂದವೆಂಬುದ ಅಲಿಂಗನವ ಮಾಡಿ,
ಆ ಕಂಗಳಂ ಮುಚ್ಚಿ, ಮತ್ತಮಾ ಕಂಗಳಂ ತೆರೆದು ನೋಡಲಾಗಿ,
ಧಮೇಶ್ವರಲಿಂಗವು ಕಾಣಬಂದಿತ್ತು.
–ಹೆಂಡದ ಮಾರಯ್ಯ