ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ
ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ
ಉಪರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದ ವೆಂಕಯ್ಯ ನಾಯ್ಡು ಅವರು ನಿರೀಕ್ಷೆಯಂತೆ ಪ್ರತಿಸ್ಪರ್ಧಿ ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿ ಅವರನ್ನು ಸುಲಭವಾಗಿ ಸೋಲಿಸುವ ಮೂಲಕ ಭಾರತದ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ವೆಂಕಯ್ಯ ನಾಯ್ಡು ಅವರು 519 ಮತಗಳಿಸುವ ಮೂಲಕ ವಿಜಯಿಯಾದರೆ, ಪ್ರತಿಸ್ಪರ್ಧಿ ಗೋಪಾಲ ಕೃಷ್ಣ ಗಾಂಧಿಯವರು 244 ಮತಗಳನ್ನು ಪಡೆದು ಸುಲಭ ಸೋಲು ಒಪ್ಪಿಕೊಂಡಿದ್ದಾರೆ.
ಪ್ರಧಾನ ಮಂತ್ರಿ ಮೋದಿ ಅವರು ಸಂಸತ್ತಿನಲ್ಲಿ ಮೊದಲ ಮತದಾನ ಮಾಡಿದ್ದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಿತು. ಸಂಸತ್ತಿನಲ್ಲಿ ಅತಿ ಹೆಚ್ಚು ಸ್ಥಾನ ಹೊಂದಿದ್ದ ಎನ್‍ಡಿಎ ಸುಲಭವಾಗಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ವಿಜಯದ ನಗೆ ಬೀರಿತು. ಉಪರಾಷ್ಟ್ರಪತಿ ಆಯ್ಕೆಗೆ ನಡೆದ ಒಟ್ಟು ಮತದಾನ ಶೇ.98.21 ರಷ್ಟು ಎಂದು ತಿಳಿದು ಬಂದಿದೆ. ಪ್ರಧಾನಿ ಸೇರಿದಂತೆ ಬಿಜೆಪಿ ಸಂಸತ್ ಸದಸ್ಯರು ಮತ್ತು ಇತರೆ ಸದಸ್ಯರು ವೆಂಕಯ್ಯ ನಾಯ್ಡು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.