ಪ್ರಮುಖ ಸುದ್ದಿ

ಹಂಪಿಯ ವಿಶ್ವ ದರ್ಶನ, ಗತವೈಭವ ನೆನಪು

ಇಂದು ವಿಶ್ವ ಪರಂಪರೆಯ ದಿನ- ಯುನೆಸ್ಕೋ ವಿಶ್ವ ಪರಂಪರೆಯ ತಾಣ
ಹಂಪಿಯ ವಿಶ್ವ ದರ್ಶನ, ಗತವೈಭವ ನೆನಪು

ಬಳ್ಳಾರಿ ಜಿಲ್ಲೆಯ ಹಂಪೆಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಗುರುತಿಸಲಾಗಿದೆ. ವಿಶ್ವದ ಪ್ರಮುಖ ಪರಂಪರೆಯ ತಾಣಗಳಲ್ಲಿ ಹಂಪಿಗೆ ಸ್ಥಾನವನ್ನು ನೀಡಿದ್ದು ಕನ್ನಡಿಗರ ಹೆಮ್ಮೆ. ಇವತ್ತಿನ ಸಂದರ್ಭದಲ್ಲಿ ಹಂಪೆಯ ಗತವೈಭವದ ಮೆಲಕು ಹಾಕೋಣ.

ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಈ ಊರು, ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು ‘ಪಂಪ’ ಎಂದಿತ್ತು, ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು ‘ವಿಜಯನಗರ’ ಮತ್ತು ‘ವಿರುಪಾಕ್ಷಪುರ’ ಎಂದು ಕರೆಯಲ್ಪಟ್ಟಿತು.

ವಿಜಯನಗರ ಸಾಮ್ರಾಜ್ಯದ ಅತೀ ಯಶಸ್ವಿ ಒಡೆಯನಾದ ಕೃಷ್ಣದೇವರಾಯನ ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದು ಕೊಳ್ಳುತ್ತಾ ಬಂತು.

ಕೊನೆಗೆ ತಾಳೀಕೋಟೆಯ ಯುದ್ಧದಲ್ಲಿ ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳು ನಾಶವಾದವು. ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.

ಮಲ್ಲಿಕಾರ್ಜುನ ಹತ್ತಿಕುಣಿ. ಪತ್ರಕರ್ತ.

Related Articles

Leave a Reply

Your email address will not be published. Required fields are marked *

Back to top button