ಪ್ರಮುಖ ಸುದ್ದಿ
ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ
ಚಿತ್ರದುರ್ಗ : ತಾಲೂಕಿನ ಮಾಡನಾಯಕನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು , ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಕೋಮ್ಯಾರನಗರ ಗ್ರಾಮದ ಮಂದಾರ(19), ರುಕ್ಮಿಣಿ (20) ಹಾಗೂ ಚಾಲಕ ನೆವಿಲ್ (26) ಎಂದು ಗುರುತಿಸಲಾಗಿದೆ. ಮಹೇಂದ್ರ ಹಾಗೂ ಮನೋಹರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ಮುಧೋಳಕ್ಕೆ ಹೋಗಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದ್ದು ಕಾರು ಚಾಲಕ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಶ್ರೀನಾಥ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.