Homeಪ್ರಮುಖ ಸುದ್ದಿ

ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ, ಪ್ರಿಯಾಂಕಾ

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾತ್ರಿ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ರಾಹುಲ್​​, ಪ್ರಿಯಾಂಕಾರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್​ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಉಭಯ ನಾಯಕರು ನಾಳೆ ಬೆಳಗ್ಗೆ ಕೇರಳದ ವಯನಾಡ್​​ಗೆ ತೆರಳಲಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಹುಲ್ ಹಾಗೂ ಪ್ರಿಯಾಂಕಾ ಕೇರಳದ ಮಲಪ್ಪುರಂ ಜಿಲ್ಲೆ ಹಾಗೂ ಕಲ್ಪಟ್ಟಾದಲ್ಲಿ ಬುಧವಾರ ಮತದಾರರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ವಯನಾಡ್ ತೊರೆದು ರಾಯ್​ಬರೇಲಿ ಉಳಿಸಿಕೊಂಡರೆ ಅವರ ಸ್ಥಾನಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ರಾಯಬರೇಲಿಯನ್ನು ಉಳಿಸಿಕೊಂಡು ಹಾಲಿ ಕ್ಷೇತ್ರವಾದ ವಯನಾಡನ್ನು ಹೊರಗಿಡುವ ಬಗ್ಗೆ ರಾಹುಲ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.   Ad

Related Articles

Leave a Reply

Your email address will not be published. Required fields are marked *

Back to top button