ಪ್ರಮುಖ ಸುದ್ದಿ
ಪ್ರಜ್ವಲ್ ರೇವಣ್ಣ ಕೇಸ್: ‘ಎಸ್ಐಟಿಯ ತನಿಖೆಯಲ್ಲಿ ನಾವು ಮಧ್ಯಪ್ರವೇಶಿಸಲ್ಲ’- ಸಿಎಂ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಸ್ಐಟಿ ಅಧಿಕಾರಿಗಳ ತನಿಖೆಯಲ್ಲಿ ನಾವು ಮಧ್ಯಪ್ರವೇಶಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹೀಗೆ ಹೇಳಲು ಅವರಿಗೆ ಯಾವ ನೈತಿಕತೆ ಇದೆ. ಹಾಗಂತ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದು ಹೇಳಲ್ಲ ಎಂದಿದ್ದಾರೆ.
ಈ ಹಿಂದೆ ಸಿಬಿಐ ಬಗ್ಗೆ ಬಿಜೆಪಿಯವರು ಸಿಬಿಐ ಅಂದ್ರೆ ಕರೆಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಎಷ್ಟೋ ಕೇಸ್ ಸಿಬಿಐಗೆ ಕೊಡಿ ಎಂದಿದ್ದೆವು. ಯಾವುದಾದರೂ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ರಾ? ಸಿಬಿಐಗೆ ಕೊಡುವಂತೆ ಆಗ್ರಹ ಮಾಡಲು ಯಾವ ನೈತಿಕತೆ ಇದೆ? ಹಿಂದೆ ನಾನು 7 ಕೇಸ್ ಸಿಬಿಐಗೆ ಕೊಟ್ಟಿದ್ದೆ, ಆ ಕೇಸ್ ಏನಾಯ್ತು ಎಂದು ಪ್ರಶ್ನೆ ಮಾಡಿದ್ದಾರೆ.