ಪ್ರಮುಖ ಸುದ್ದಿ
ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಯಾದಗಿರಿ: ಕೃಷ್ಣಾ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಕದರಾಪುರ ಗ್ರಾಮದ ಕೃಷ್ಣಾ ನದಿಯ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ನಲ್ಲಿ ನಡೆದಿದೆ.
ಕುಟುಂಬ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದ್ದು, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ನಿವಾಸಿ ಸುಜಾತಾ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.