ಪ್ರಮುಖ ಸುದ್ದಿ
ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಂತ್ರಿಗಿರಿ!
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರು ಈಗ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ. ತಮಿಳುನಾಡು ಸೇರಿ ಕೆಲವೆಡೆ ಮಾತ್ರ ಮಾಜಿ ಮುಖ್ಯಮಂತ್ರಿಗಳಾದವರು ಮತ್ತೆ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ ಉದಾಹರಣೆಗಳಿವೆ. ಆದ್ರೆ, ಕರ್ನಾಟಕದಲ್ಲಿ ಬಿ.ಡಿ.ಜತ್ತಿ ಅವರು ಮಾತ್ರ ಮಾಜಿ ಸಿಎಂ ಆದ ಬಳಿಕ ಮತ್ತೆ ನಿಜಲಿಂಗಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಇದೀಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿ ಸೇರಿದ್ದಾರೆ.
ಈಗಾಗಲೇ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಗಧೀಶ್ ಶೆಟ್ಟರ್ ಅವರು ಯಡಿಯೂರಪ್ಪ ಅವರು ಹಿರಿಯ ನಾಯಕರು. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದ್ದರು. ನಿರೀಕ್ಷೆಯಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಂತ್ರಿಭಾಗ್ಯ ಒಲಿದಿದೆ.