ಪ್ರಮುಖ ಸುದ್ದಿ
‘ಕತ್ತಿ’ ಚಿತ್ತ ‘ಕೈ’ನತ್ತ : ಕುತೂಹಲ ಕೆರಳಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿ!
ಬೆಂಗಳೂರು : ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಉಮೇಶ್ ಕತ್ತಿ ಅಸಮಾಧಾನಗೊಂಡಿದ್ದಾರೆ. ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ ಸಿಎಲ್ ಪಿ ನಾಯಕ , ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಇಂದು 11ಗಂಟೆಗೆ ಸಿದ್ಧರಾಮಯ್ಯ ಸುದ್ದಿಗೋಷ್ಠಿ ಕರೆದಿದ್ದು ಭಾರೀ ಮಹತ್ವ ಪಡೆದುಕೊಂಡಿದೆ.
ಬಿಜೆಪಿ ಶಾಸಕ ಉಮೇಶ್ ಕತ್ತಿ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಲಿದ್ದಾರೆ. ಅಂತೆಯೇ ಮೈತ್ರಿ ಸರ್ಕಾರ ಪತನಕ್ಕೆ ಸಿದ್ಧರಾಮಯ್ಯ ಅವರೇ ಕಾರಣ ಎಂದಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಸಿದ್ಧರಾಮಯ್ಯ ತಿರುಗೇಟು ನೀಡುವ ಸಾಧ್ಯತೆ ಇದ್ದು ಸುದ್ದಿಗೋಷ್ಠಿ ಕುತೂಹಲ ಕೆರಳಿಸಿದೆ.