ಪ್ರಮುಖ ಸುದ್ದಿ
ಒಂದೇ ಕಲ್ಲು ಎರಡು ಏಟು : ‘ಅನೈತಿಕ ಮಾರ್ಗದಿ ಅಧಿಕಾರ ಹಿಡಿದವರ ಕಥೆ ಹೀಗೆ ‘!
ಬೆಂಗಳೂರು : ಮುಖ್ಯಮಂತ್ರಿಗಳು ಒಳಗೊಂಡಂತೆ ಸರ್ಕಾರದ ಎಲ್ಲ ಮಂತ್ರಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶೀಘ್ರಗತಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಬೇಕು. ಇದನ್ನು ಬಿಟ್ಟು ನಿತ್ಯ ಬೆಂಗಳೂರಿನಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಓಡಾಡುತ್ತಿದ್ದರೆ ಜನರ ಕಷ್ಟ ಕೇಳುವವರಾರು?. ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ ಅನೈತಿಕ ಮಾರ್ಗದ ಮೂಲಕ ಅಧಿಕಾರ ಹಿಡಿದವರ ಕತೆಯೇ ಹೀಗೆ, ಅವರಿಗೆ ಜನಪರ ಕಾಳಜಿಯಿರಲ್ಲ. ಎಂದು ಹೇಳುವ ಮೂಲಕ ಒಂದೇ ಕಲ್ಲಿಗೆ ಎರಡು ಏಟು ನೀಡಿದ್ದಾರೆ. ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರುವುದರ ಜತೆಗೆ ಮಾಜಿ ಸಿಎಂ ಕುಮಾರಸ್ವಾಮಿಗೂ ಟಾಂಗ್ ನೀಡಿದ್ದಾರೆ.