ಪ್ರಮುಖ ಸುದ್ದಿ
ಕೊನೆಗೂ ಸ್ವಕ್ಷೇತ್ರ ಸಂಚಾರಕ್ಕೆ ಹೊರಟ ಮಾಜಿ ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ನೆರೆ ಪ್ರವಾಹದಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸುಮಾರು 40 ಗ್ರಾಮಗಳ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 15ದಿನಗಳಿಂದ ಅಲ್ಲಿನ ಜನ ಜಲಪ್ರಳಯದಿಂದಾಗಿ ತತ್ತರಿಸಿದ್ದಾರೆ. ಆದ್ರೆ, ಬಾದಾಮಿ ಕ್ಷೇತ್ರದ ಶಾಸಕರಾದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಮಾತ್ರ ಈ ವರೆಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಕಣ್ಣಿನ ಶಸ್ತ್ರ ಚಿಕಿತ್ಸೆ ಆಗಿರುವ ಕಾರಣ ಬಾದಾಮಿ ಭೇಟಿ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದರು. ಸಿದ್ಧರಾಮಯ್ಯ ಪುತ್ರ ಡಾ.ಯತೀಂದ್ರ ಬಾದಾಮಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದರು.
ಇಂದು ಬಾದಾಮಿಗೆ ಭೇಟಿ ನೀಡಲಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಮೂರು ದಿನಗಳ ಕಾಲ ಕ್ಷೇತ್ರದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಎರಡು ದಿನಗಳ ಕಾಲ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಆಗಷ್ಟ್ 21ರಂದು ಅಧಿಕಾರಿಗಳ ಸಭೆ ನಡೆಸಲಿದ್ದಾರೆ.