ಯಾದಗಿರಿ ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಗಮನಸೆಳೆದ ಯೋಗ ಪ್ರದರ್ಶನ
ವಿಶ್ವ ಯೋಗ ದಿನಾಚರಣೆಃ ಗಮನ ಸೆಳೆದ ಯೋಗ ಪ್ರದಶನ
ಯಾದಗಿರಿ; ಯಾದಗಿರಿಯಲ್ಲಿಂದು ಎಂಟನೇಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ ಮೈದಾನದಲ್ಲಿ ಇಂದು ಪತಂಜಲಿ ಯೋಗ ಸಮಿತಿ ಸಂಚಾಲಕ ಅನೀಲ್ ಗುರುಜಿ ಅವರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಸೇರಿದಂತೆ ನಗರದ ನಾಗರಿಕರಿಗೆ ಯೋಗ ಅಭ್ಯಾಸ ಮಾಡಿಸುವ ಮೂಲಕ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ನೆರವಾದರು.
ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಮರೇಶ್ ನಾಯಕ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಶಾಆಲಂ ಹುಸೇನ್, ಲೋಕಾಯುಕ್ತ ಎಸ್.ಪಿ. ಎಸ್.ಆರ್.ಕರ್ನೂಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ್. ಎಸ್ ಸೇರಿದಂತೆ ಹಲವು ಗಣ್ಯರು, ನಗರ ನಾಗರಿಕರು ಯೋಗಾಭ್ಯಾಸದಲ್ಲಿ ಆಸಕ್ತಿಯಿಂದ ಭಾಗವಹಿಸಿ ಇನ್ನಷ್ಟು ಮೆರಗು ತಂದರು.
ಯೋಗಾಭ್ಯಾಸ ಅಂಗವಾಗಿ ವಿವಿಧ ಯೋಗ ಪ್ರದರ್ಶನಗಳಾದ ಮಕರಾಸನ, ವೃಕ್ಷಾಸನ, ಭುಜಂಗಾಸನ, ವಜ್ರಾಸನ, ದಂಡಾಸನ ಸೇರಿದಂತೆ ವಿವಿಧ ಪ್ರಕಾರದ ಯೋಗ ಪ್ರದರ್ಶನದಲ್ಲಿ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ರಾಜನಕೋಳೂರ, ಗೆದ್ದಲ ಮರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಮುಕ್ತ ಮಲ್ಲಕಂಬ ಹಾಗೂ ರಾಷ್ಟ್ರೀಯ ಸ್ಕಿಪ್ಪಿಂಗ್ ಸ್ಪರ್ದೆಗೆ ಆಯ್ಕೆಯಾದ ಮಕ್ಕಳ ಸ್ಕಿಪ್ಪಿಂಗ್ ಪ್ರದರ್ಶನವು ಹಾಗೂ ಸಾಯಿ ಯೋಗ ನೃತ್ಯ ಶಾಲೆಯವರಿಂದ ನೃತ್ಯ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.
ಈ ಯೋಗ ದಿನಾಚರಣೆ ಅಂಗವಾಗಿ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಜಿಲ್ಲಾ ಆಯುಷ ಅಧಿಕಾರಿ ವಂದನಾ ಗಾಳಿ ಸ್ವಾಗತಿಸಿದರು. ಡಾ.ಪ್ರಕಾಶ ರಾಜಾಪುರ, ಸಂಗಮೇಶ ಸಂಗಾಪುರ ಕಾರ್ಯಕ್ರಮ ನಿರ್ವಹಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುμï ಇಲಾಖೆ, ಪತಂಜಲಿ ಯೋಗ ಸಮಿತಿ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಎಲ್ಲರ ಗಮನ ಸೆಳೆಯಿತು. ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಪತಂಜಲಿಯ ಯೋಗ ಸಮಿತಿಯವರು, ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್-ಗೈಡ್ಸ್ ನ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದ್ದರು.