ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ, ರಾಜ್ಯದಲ್ಲೂ ಬಿಜೆಪಿ ಬರಲಿದೆ -ಬಿಎಸ್ ವೈ
ಬೆಂಗಳೂರು: ಗುಜರಾತಿನ ಜನತ ಸತತ ಆರನೇ ಬಾರಿಗೆ ಬಿಜೆಪಿ ಬೆಂಬಲಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲೂ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ಸಿನ ಜಾತಿ ರಾಜಕಾರಣಕ್ಕೆ ಗುಜರಾತ ಮತ್ತು ಹಿಮಾಚಲ ಪ್ರದೇಶದ ಜನ ತಕ್ಕ ಪಾಠ ಕಲಿಸಿದ್ದಾರೆ. ನೋಟ್ ಬ್ಯಾನ್ ಮತ್ತು ಜಿಎಸ್ ಟಿ ಬಗ್ಗೆ ಕಾಂಗ್ರೆಸ್ ಎಷ್ಟೆಲ್ಲಾ ಅಪಪ್ರಚಾರ ನಡೆಸಿದರೂ ಸಹ ಜನ ಅಭಿವೃದ್ಧಿ ಪರ ಮೋದಿ ಸರ್ಕಾರವನ್ನು ಬೆಂಬಲಿಸಿದ್ದಾರೆ. ಅಭಿವೃದ್ಧಿ ಮಾದರಿಯ ಗುಜರಾತಿನ ಬಿಜೆಪಿ ಸರ್ಕಾರವನ್ನು ಬೆಂಬಲಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ , ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಗುಜರಾತ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಿ.ಎಸ್.ಯಡಿಯೂರಪ್ಪ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್.ವೈ ಈಗಾಗಲೇ ರಾಜ್ಯದಲ್ಲೂ ಬಿಜೆಪಿ ಪರಿವರ್ತನಾ ಯಾತ್ರೆ ನಡೆಸುತ್ತಿದೆ. ಕಾಂಗ್ರೆಸ್ ಆಡಳಿತದಿಂದ ಬೇಸತ್ತಿರುವ ಜನ ಬಿಜೆಪಿ ಯಾತ್ರೆಗೆ ಬೆಂಬಲಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದರು.