ಪ್ರಮುಖ ಸುದ್ದಿ
ಯಾದಗಿರಿ ಶಾಸಕರಿಗೂ ಕೊರೊನಾ ಸೋಂಕು ದೃಢ.?
ಯಾದಗಿರಿಃ ಇಲ್ಲಿನ ಶಾಸಕ ವೆಂಕಟರಡ್ಡಿ ಮುದ್ನಾಳ ಅವರಿಗೂ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಸೂಕ್ತ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿದ್ದ ಅವರು, ನಿನ್ನೆಯೇ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದಾರೂ ಎನ್ನಲಾಗಿದೆ. ಇಂದು ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಎನ್ನಲಾಗಿದೆ.
ಹೀಗಾಗಿ ಶಾಸಕರ ಸಂಪರ್ಕದಲ್ಲಿರುವವರನ್ನು ಗುರುತಿಸ ಲಾಗುತಿದ್ದು, ಅಂತವರು ಕೂಡಲೇ ಕೊರೊನಾ ಟೆಸ್ಟಿಂಗ್ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕೆಂದು ಹೇಳಲಾಗಿದೆ. ಶಾಸಕರು ಸೂಕ್ತ ಚಿಕಿತ್ಸೆಗಾಗಿ ಬೆಂಗಳೂರಿನ ವಸಂತ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಲು ತೆರಳುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.