Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆಯನ್ನು ಮಾಡಬೇಕು.

ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ತಿಂಗಳು 25ನೇ ತಾರೀಖಿನೊಳಗೆ ತಾನು ನಿರುದ್ಯೋಗಿಯೆಂದು. ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಜುಲೈ ತಿಂಗಳ ಸ್ವಯಂ ದೃಢೀಕರಣ ಮಾಡಿಕೊಳ್ಳದಿರುವ ಫಲಾನುಭವಿಗಳಿಗೆ ಜುಲೈ 25 ರವರೆಗೆ ಅವಕಾಶವಿದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು , ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ವಿಳಾಸ  https://sevasindhugs.karnataka.gov.in ಸಂಪರ್ಕಿಸಬಹುದು. ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ದ.ಕ.. ಮಂಗಳೂರು ಇಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button